ಕಟ್ಟಡ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

Tanaji Sagar 22
Published on

ಬೀದರ್: ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿದೆ ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ತಿಳಿಸಿದ್ದಾರೆ.

ಬಹು ದಿನಗಳ ಬೇಡಿಕೆ ಮೇರೆಗೆ ನೋಂದಾಯಿತ ಕಟ್ಟಡ ಕಾರ್ಮಿಕರ ಅಪಘಾತ ಪರಿಹಾರ ಮೊತ್ತ, ಅಂತ್ಯಕ್ರಿಯೆ ವೆಚ್ಚ ಹಾಗೂ ಅನುಗ್ರಹ ರಾಶಿ ಸಹಾಯ ಧನ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ.

ಕೆಲಸದ ಸ್ಥಳದಲ್ಲಿ ಅಪಘಾತ ಉಂಟಾಗಿ ಕಟ್ಟಡ ಕಾರ್ಮಿಕರು ಮೃತಪಟ್ಟಾಗ ನೀಡಲಾಗುತ್ತಿದ್ದ ರೂ. 5 ಲಕ್ಷ ಪರಿಹಾರವನ್ನು ರೂ. 8 ಲಕ್ಷಕ್ಕೆ, ಮರಣ ಹೊಂದಿದಾಗ ಕೊಡಲಾಗುತ್ತಿದ್ದ ಅಂತ್ಯಕ್ರಿಯೆ ವೆಚ್ಚ ಹಾಗೂ ಅನುಗ್ರಹ ರಾಶಿ ಸಹಾಯ ಧನವನ್ನು ರೂ. 75 ಸಾವಿರದಿಂದ ರೂ. 1.5 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕರ ಮನವಿಗೆ ಸ್ಪಂದಿಸಿದ್ದಕ್ಕೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net