ಕಾವ, ಜಾಣ, ರತ್ನ ಪರೀಕ್ಷೆಗೆ ಅರ್ಜಿ ಆಹ್ವಾನ

Suresh Chanshetty-1
Published on

ಬೀದರ್: ಕನ್ನಡ ಸಾಹಿತ್ಯ ಪರಿಷತ್ 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ.

ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ರೂ. 50 ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 30 ರ ವರೆಗೆ ಅರ್ಜಿ ಸಲ್ಲಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‍ನ ಮಾರಾಟ ಮಳಿಗೆಯಲ್ಲಿ ರೂ. 25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆ ಪಡೆಯಬಹುದು. ಪರಿಷತ್ ಹೆಸರಿಗೆ ರೂ. 65 ಮನಿ ಆರ್ಡರ್ ಮಾಡಿದರೆ ಅರ್ಜಿ ನಮೂನೆ ಅಂಚೆ ಮೂಲಕವೂ ಕಳುಹಿಸಿಕೊಡುವ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ.

ಪರೀಕ್ಷಾ ಅರ್ಜಿಗಳನ್ನು ಪರಿಷತ್‍ನ ಅಂತರ್ಜಾಲ ತಾಣ ಮೂಲಕ ಸಹ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ರೂ. 25 ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net