ಸಿದ್ಧಾರೂಢರ ಪುಣ್ಯಾರಾಧನೆ 10ರಂದು

sri-siddharoodha Swamiji
Published on

ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಆಗಸ್ಟ್ 10 ರಂದು ಸಿದ್ಧಾರೂಢರ 96ನೇ ಪುಣ್ಯಾರಾಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಬೆಳಿಗ್ಗೆ 11ಕ್ಕೆ ಭಜನೆ, ಮಧ್ಯಾಹ್ನ 12ಕ್ಕೆ ಪ್ರವಚನ, ನಂತರ ಮಹಾ ಪ್ರಸಾದ ವಿತರಣೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಗುರು ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net