

ಬೀದರ್: ತಾಲ್ಲೂಕಿನ ಸಿಂದೋಲ್ ತಾಂಡಾದ ಸುಧಾಕರ ರಾಠೋಡ್ ಅವರನ್ನು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಸಂಘದ ರಾಜ್ಯ ಅಧ್ಯಕ್ಷ ವಿಜಯ ಜಾಧವ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸದಸ್ಯತ್ವ ಅಭಿಯಾನ, ಯುವ ಸಮೂಹದ ಸಂಘಟನೆ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದ ಬಲವರ್ಧನೆಗೆ ಶ್ರಮಿಸಬೇಕು ಎಂದು ಅವರು ಸೂಚಿಸಿದ್ದಾರೆ.