ಕೃಷ್ಣ ಜನ್ಮಾಷ್ಟಮಿ 15ರಂದು

Sri Krishna
Published on

ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಆಗಸ್ಟ್ 15 ರಂದು ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ರಾತ್ರಿ 10ಕ್ಕೆ ಭಜನೆ, ರಾತ್ರಿ 11ಕ್ಕೆ ಕೃಷ್ಣನ ಬಾಲ ಲೀಲೆ ಕುರಿತು ಪ್ರವಚನ, ರಾತ್ರಿ 12ಕ್ಕೆ ತೊಟ್ಟಿಲು ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಗುರುವಿನ ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net