

ಬೀದರ್: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ವತಿಯಿಂದ ನಗರದಲ್ಲಿ ಆಗಸ್ಟ್ 15 ರಂದು ಹಮ್ಮಿಕೊಳ್ಳಲಾದ ಸ್ವಾತಂತ್ರ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ಮನವಿ ಮಾಡಿದ್ದಾರೆ.
ಯುವ ಜನರಲ್ಲಿ ದೇಶಾಭಿಮಾನ ಹಾಗೂ ದೇಶ ಭಕ್ತಿ ಜಾಗೃತಗೊಳಿಸಲು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.