

ಬೀದರ್: ನಗರದ ಗುರುದ್ವಾರ ಗೇಟ್ ಎದುರಿನ ಕೃಷ್ಣ ರಿಜೆನ್ಸಿ ಸಭಾಂಗಣದಲ್ಲಿ ಆಗಸ್ಟ್ 15 ರಂದು ಮಧ್ಯಾಹ್ನ 1ಕ್ಕೆ ಸರ್ಕಾರಿ ಹೊರ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಘೋಷಣೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಂಘದ ರಾಜ್ಯ ಅಧ್ಯಕ್ಷ ಸುಧಾಕರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ರಾಠೋಡ್ ಹಾಗೂ ಇತರ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಶೇಕ್ ಸಾಜೀದ್, ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಳಗೆ, ಖಜಾಂಚಿ ಮಹಾದೇವ ಮಂಠಾಳೆ ಹಾಗೂ ಶಿವಕುಮಾರ ಸೇನಾ ಮನವಿ ಮಾಡಿದ್ದಾರೆ.