ಬ್ಯಾರಿಕೇಡ್ ಹಸ್ತಾಂತರ 26ಕ್ಕೆ

Pappu Patil Khanapur - Copy
Published on

ಬೀದರ್: ಜೈ ಭಾರತ ಮಾತಾ ಸೇವಾ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನದ ನಿಮಿತ್ತ ಸಮಿತಿಯು ಮಂಗಳವಾರ (ಆ. 26) ಬೆಳಿಗ್ಗೆ 11.30ಕ್ಕೆ ಇಲ್ಲಿಯ ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಬ್ಯಾರಿಕೇಡ್ ಹಸ್ತಾಂತರ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸಂಸದ ಸಾಗರ್ ಖಂಡ್ರೆ ಹಾಗೂ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸುವರು.

ಹುಲಸೂರಿನ ಶಿವಾನಂದ ಸ್ವಾಮೀಜಿ, ಹಲಬರ್ಗಾದ ಹಾವಗಿಲಿಂಗೇಶ್ವರ ಶಿವಾಚಾರ್ಯ, ಮಳಚಾಪುರದ ಸದ್ರೂಪಾನಂದ ಸ್ವಾಮೀಜಿ ಸಾನಿಧ್ಯ, ಜೈ ಭಾರತ ಮಾತಾ ಸೇವಾ ಸಮಿತಿಯ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್‍ಪಿ, ಶಿವನಗೌಡ ಪಾಟೀಲ, ಸಂಚಾರ ಠಾಣೆ ಸಿಪಿಐ ಬಾಬುರಾವ್ ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನವನ್ನು ಪ್ರತಿ ವರ್ಷ ಸಾಮಾಜಿಕ ಕಾರ್ಯಗಳೊಂದಿಗೆ ಆಚರಿಸುತ್ತಾ ಬರಲಾಗಿದೆ. ಈ ಬಾರಿ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ವಿತರಣೆ ಮೂಲಕ ಜನ್ಮದಿನ ಆಚರಿಸಲಾಗುತ್ತಿದೆ ಎಂದು ಪಪ್ಪು ಪಾಟೀಲ ಖಾನಾಪುರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net