ಎಕರೆಗೆ ರೂ. 25 ಸಾವಿರ ಪರಿಹಾರಕ್ಕೆ ಒತ್ತಾಯ

Tanaji Sagar 22
Published on
ಬೀದರ್: ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಎಕರೆಗೆ ರೂ. 25 ಸಾವಿರ ಪರಿಹಾರ ಕೊಡಬೇಕು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಸುರಿದ ಸತತ ಮಳೆಯಿಂದಾಗಿ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್, ತೊಗರಿ ಹಾಗೂ ಹತ್ತಿ ಸಂಪೂರ್ಣ ಹಾಳಾಗಿವೆ ಎಂದು ತಿಳಿಸಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ಅನೇಕ ರೈತರು ಈ ಬಾರಿ ಬಂಪರ್ ಬೆಳೆಯ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಮಳೆ ನೀರಲ್ಲಿ ಆ ನಿರೀಕ್ಷೆಗಳೆಲ್ಲ ಕೊಚ್ಚಿಕೊಂಡು ಹೋಗಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ಕೂಡಲೇ ಬೆಳೆ ನಷ್ಟದ ವಾಸ್ತವ ಸಮೀಕ್ಷೆ ನಡೆಸಬೇಕು. ವಿಳಂಬ ಮಾಡದೆ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net