ಪೊಲೀಸ್ ಇಲಾಖೆಗೆ 21 ಬ್ಯಾರಿಕೇಡ್ ಕೊಡುಗೆ

Jai Bharat Maata Samiti-3
Published on

ಬೀದರ್: ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯು ಪೊಲೀಸ್ ಇಲಾಖೆಗೆ 21 ಬ್ಯಾರಿಕೇಡ್‍ಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಇಲ್ಲಿ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ಅವರು ಪೊಲೀಸ್ ಇಲಾಖೆಗೆ ಬ್ಯಾರಿಕೇಡ್‍ಗಳನ್ನು ಹಸ್ತಾಂತರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಸಾಗರ್ ಖಂಡ್ರೆ ಅವರು, ಸಮಿತಿ ಪ್ರತಿ ವರ್ಷ ಸಾಮಾಜಿಕ ಚಟುವಟಿಕೆಗಳೊಂದಿಗೆ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನ ಆಚರಿಸುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.

ಪೊಲೀಸರು ಸಾರ್ವಜನಿಕರ ಸುರಕ್ಷತೆಗೆ ಶ್ರಮಿಸುತ್ತಾರೆ. ಹೀಗಾಗಿ ಸಾರ್ವಜನಿಕರು ಅವರಿಗೆ ಸಹಕಾರ ನೀಡಬೇಕು. ಇಲಾಖೆಗೆ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದ ಸಮಿತಿ ಕಾರ್ಯ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘ ಸಂಸ್ಥೆಗಳು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾತನಾಡಿ, ಹವಾ ಮಲ್ಲಿನಾಥ ಮಹಾರಾಜರು ಸಮಾಜೋಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿ ಇಲಾಖೆಗೆ ಬ್ಯಾರಿಕೇಡ್ ವಿತರಿಸಿ ಅವರ ಜನ್ಮದಿನ ಆಚರಿಸಿರುವುದು ಉತ್ತಮ ಬೆಳವಣಿಗೆ ಎಂದರು.

ಹುಲಸೂರಿನ ಶಿವಾನಂದ ಸ್ವಾಮೀಜಿ, ಹಲಬರ್ಗಾದ ಹಾವಗಿಲಿಂಗೇಶ್ವರ ಶಿವಾಚಾರ್ಯ, ಮಳಚಾಪುರದ ಸದ್ರೂಪಾನಂದ ಸ್ವಾಮೀಜಿ, ಅಮೃತಪ್ಪ ಮತ್ತ್ಯಾ ಕೌಠಾ ಸಾನಿಧ್ಯ, ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ಅಧ್ಯಕ್ಷತೆ ವಹಿಸಿದ್ದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್‍ಪಿ ಶಿವನಗೌಡ ಪಾಟೀಲ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಪ್ರಮುಖರಾದ ಮಾಣಿಕ ಮೇತ್ರೆ, ಗಂಗಾಧರ ಶಾಸ್ತ್ರಿ, ಚಂದ್ರಶೇಖರ ಕಟ್ಟೆ, ಸತೀಶ್ ಪಾಟೀಲ, ನಂದೀಶ್ ಪಾಟೀಲ, ಅಜಯ್ ಕುದ್ರೆ, ಆದೇಶ ಚಿಮಕೋಡೆ, ಆನಂದ ರಾಂಪುರೆ, ವಿಶಾಲ್ ಬಂಟಿ, ಅಜಯ್ ದೀನೆ, ಕೃಷ್ಣ ವಾರಿಕ್, ಪ್ರಣವ್ ಶಿವಪೂಜೆ, ನಿತೀಶ್ ಪಾಟೀಲ, ನಾಗೇಶ ಪಾಟೀಲ, ಸಾಯಿನಾಥ ತೆಲಂಗ್, ಅಜಯ್ ಮಂಡಲ್, ಆಕಾಶ್ ಸ್ವಾಮಿ, ಮಲ್ಲಿಕಾರ್ಜುನ ಮೇತ್ರೆ, ಸುನೀಲ್ ಮಡಿವಾಳ, ಸಂತೋಷ್, ಆನಂದ ಪಾಟೀಲ, ಶ್ರೀಕಾಂತ ಭಾವನಿ, ಕೈಲಾಶ ಹಳ್ಳೆ, ಭಗವಾನ್, ವೀರಶೆಟ್ಟಿ ಕೊಳಾರ, ಆಕಾಶ್ ಜನವಾಡ, ಸಿದ್ದು ಮಮದಾಪುರೆ, ದೀಪಕ್ ಪಾಟೀಲ, ರೋಹಿತ್, ಸುನೀಲ್, ಬಸವರಾಜ, ಗೌಸೊದ್ದೀನ್, ಮಹಾದೇವ ಪಾಟೀಲ ಮತ್ತಿತರರು ಇದ್ದರು. ದೀಪಕ್ ಥಮಕೆ ನಿರೂಪಿಸಿದರು.

ಪ್ರತಿ ವರ್ಷ ಸಮಾಜಮುಖಿ ಕಾರ್ಯಗಳೊಂದಿಗೆ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನ ಆಚರಿಸಿಕೊಂಡು ಬರುತ್ತಿದ್ದೇವೆ. ಈ ಬಾರಿ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತ ನಿಯಂತ್ರಣದ ಪೊಲೀಸರ ಕಾರ್ಯಕ್ಕೆ ಸಹಕರಿಸಲು ಸಮಿತಿ ವತಿಯಿಂದ ಇಲಾಖೆಗೆ ಬ್ಯಾರಿಕೇಡ್‍ಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪಪ್ಪು ಪಾಟೀಲ ಖಾನಾಪುರ ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ಭಾಲ್ಕಿ ತಾಲ್ಲೂಕು ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net