ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ

Suryakant Sadhure - Copy
Published on

ಬೀದರ್: ಬೀದರ್ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 16 ರ ವ್ಯಾಪ್ತಿಯ ನೌಬಾದ್‍ನಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ ಒತ್ತಾಯಿಸಿದ್ದಾರೆ.

ನಗರದಲ್ಲಿ ಶನಿವಾರ ಈ ಕುರಿತು ಪೌರಾಡಳಿತ ಸಚಿವ ರಹೀಂಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನೌಬಾದ್, ಅಲಿಯಾಬಾದ್, ಚೌಳಿ, ಚೊಂಡಿ, ಕೊಳಾರ ಸೇರಿದಂತೆ ವಿವಿಧೆಡೆಯ ರೋಗಿಗಳು ಪ್ರಾಥಮಿಕ ಕೇಂದ್ರಕ್ಕೆ ಬರುತ್ತಾರೆ. ಆದರೆ, ಕೇಂದ್ರದಲ್ಲಿ ವಿವಿಧ ತುರ್ತು ಚಿಕಿತ್ಸಾ ಸೌಲಭ್ಯ ಇಲ್ಲದ ಕಾರಣ ತೊಂದರೆ ಅನುಭವಿಸುತ್ತಿದ್ದಾರೆ. ಅನಿವಾರ್ಯವಾಗಿ ಬ್ರಿಮ್ಸ್ ಆಸ್ಪತ್ರೆಗೆ ತೆರಳುತ್ತಿದ್ದಾರೆ ಎಂದು ಗಮನ ಸೆಳೆದರು.

ರೋಗಿಗಳ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ ಎಂದು ಮನವರಿಕೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net