

ಬೀದರ್: ಸರ್ಕಾರ ಆನ್‍ಲೈನ್ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಂಡಿರುವುದನ್ನು ರಾಜ್ಯ ಪಂಚಾಯತ್‍ರಾಜ್ ಅಭಿವೃದ್ಧಿ ಅಧಿಕಾರಿಗಳ ಗ್ರೂಪ್ ಬಿ ಹುದ್ದೆ ಉನ್ನತೀಕರಣ ಸಂಘದ ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಉಮೇಶ ಕೆ. ಜಾಬಾ ಸ್ವಾಗತಿಸಿದ್ದಾರೆ.
ಆನ್‍ಲೈನ್ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಬೇಕು ಎನ್ನುವುದು ಪಿಡಿಒಗಳ ಬಹು ದಿನಗಳ ಬೇಡಿಕೆಯಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ದಿಸೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಆನ್‍ಲೈನ್ ಕೌನ್ಸೆಲಿಂಗ್ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಸ್ಥಳದಲ್ಲೇ ವರ್ಗಾವಣೆ ಆದೇಶ ಕೂಡ ಕೊಡಲಾಗುತ್ತಿದೆ. ಹೀಗಾಗಿ ಪಿಡಿಒಗಳಿಗೆ ಸಂತಸ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.