ದೌರ್ಜನ್ಯವಾದರೆ ಅಕ್ಕ ಪಡೆ ಗಮನಕ್ಕೆ ತನ್ನಿ

Arunodaya School - Kanoonu Arivu Programme - Copy
Published on

ಬೀದರ್: ಹೆಣ್ಣುಮಕ್ಕಳು ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದರೆ ಕೂಡಲೇ ಅಕ್ಕ ಪಡೆಯ ಗಮನಕ್ಕೆ ತರಬೇಕು ಎಂದು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಪತ್ನಿ ಶೈನಿ ಗುಂಟಿ ಹೇಳಿದರು.

ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ನಗರದ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಕ್ಕ ಪಡೆ ಹೆಣ್ಣುಮಕ್ಕಳ ರಕ್ಷಣೆಗಾಗಿಯೇ ಇದೆ. ಹೀಗಾಗಿ ಏನೇ ಸಮಸ್ಯೆ ಇದ್ದರೂ ಪಡೆ ಮುಂದೆ ಹೇಳಿಕೊಳ್ಳಬೇಕು ಎಂದು ತಿಳಿಸಿದರು.

ಮಕ್ಕಳು ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶಗಳ ಬಗ್ಗೆ ಅರಿತುಕೊಳ್ಳಬೇಕು. ಸಂಕಷ್ಟದ ಸಂದರ್ಭದಲ್ಲಿ 112 ಅಥವಾ 1098ಗೆ ಕರೆ ಮಾಡಬೇಕು ಎಂದು ಸಲಹೆ ಮಾಡಿದರು.

ಸಾರ್ವಜನಿಕರ ರಕ್ಷಣೆ ಪೊಲೀಸರ ಕರ್ತವ್ಯವಾಗಿದೆ. ಹೀಗಾಗಿ ಮಕ್ಕಳು ಪೊಲೀಸರ ಬಗ್ಗೆ ಭಯ ಇಟ್ಟುಕೊಳ್ಳಬಾರದು. ಅವರೊಂದಿಗೆ ಮಾಹಿತಿಯನ್ನು ಮುಕ್ತವಾಗಿ ಹಂಚಿಕೊಳ್ಳಬೇಕು ಎಂದು ಅಕ್ಕ ಪಡೆಯ ಎಎಸ್‍ಐ ಸಂಗೀತಾ ಎಂ.ಬಿ. ಹೇಳಿದರು.

ಬಾಲ್ಯ ವಿವಾಹ ಸಮಾಜಕ್ಕೆ ಮಾರಕವಾಗಿದೆ. ಶಿಕ್ಷಾರ್ಹ ಅಪರಾಧವೂ ಆಗಿದೆ. ಅದನ್ನು ತಡೆಗಟ್ಟಲು ಎಲ್ಲರೂ ಪೊಲೀಸ್ ಇಲಾಖೆ ಜತೆಗೆ ಕೈಜೋಡಿಸಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ನುಡಿದರು.

ಅಕ್ಕ ಪಡೆಯ ಅಂಬಿಕಾ ಸಂತೋಷ್, ನೀಲಮ್ಮ, ಅಂಬಿಕಾ, ಶ್ರೀದೇವಿ ಮತ್ತಿತರರು ಇದ್ದರು. ಪ್ರಶಾಂತ ಚಕ್ರವರ್ತಿ ಸ್ವಾಗತಿಸಿದರು. ನೀಲಮ್ಮ ಗಜಲೆ ನಿರೂಪಿಸಿದರು. ಗಣಪತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net