

ಹುಮನಾಬಾದ್: ಇಲ್ಲಿನ ಪುರಸಭೆಯನ್ನು ಇದೀಗ ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ತಿಳಿಸಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ದಲ್ಲಿ ಮೇಲ್ದರ್ಜೆಗೆ ಏರಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪುರಸಭೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂದು ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಸರ್ಕಾರ, ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು.. ಅಲ್ಲದೆ ಬೆಳಗಾವಿ ಅಧಿವೇಶನದಲ್ಲಿ ಸಹ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳಿಯಲಾಗಿತ್ತು. ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಪುರಸಭೆ ಮೇಲ್ದರ್ಜೆಗೆ ಏರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದಕ್ಕೆ ಸಂತಸವಾಗಿದೆ. ಪೌರಾಡಳಿತ ಸಚಿವ ರಹೀಂಖಾನ ಹಾಗೂ ಉಸ್ಸುವಾರಿ ಸಚಿವರಿಗೆ ಕ್ಷೇತ್ರದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.