

ಹುಮನಾಬಾದ್: ಇಲ್ಲಿನ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ಸರ್ಕಾರ ಕೈಗೊಂಡ ತೀರ್ಮಾನದಿಂದ ಸಂತಸವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಹಲವಾರು ಬಾರಿ ಸಚಿವರು, ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಕೆ ಹಾಗೂ ಬೆಂಗಳೂರಿನ ಅಧಿವೇಶನದಲ್ಲಿ ವಿಷಯ ಪ್ರಾಸ್ತಾಪಿಸಲಾಗಿದೆ. ಅಲ್ಲದೆ ಸಹೋದರಾದ ಮಾಜಿ ಸಚಿವ ರಾಜಶೇಖರ ಪಾಟೀಲ್, ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್ ಸಹ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಇದೀಗ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು ಸಂತಸ ತಂದಿದೆ. ಪೌರಾಡಳಿತ ಸಚಿವ ರಹಿಮ್ ಖಾನ ಅವರಿಗೆ ಕ್ಷೇತ್ರದ ಜನತ ಪರವಾಗಿ ಅಭಿನಂದಿಸುವುಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.