

ಬೀದರ್: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‍ಎಸ್‍ಯುಐ) ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಭಾಲ್ಕಿ ತಾಲ್ಲೂಕಿನ ಬಸವನವಾಡಿ ಗ್ರಾಮದ ಮಾಧವ್ ಉಮರಾವ್ ಧುಮಾಳೆ ಅವರನ್ನು ನೇಮಕ ಮಾಡಲಾಗಿದೆ.
ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆದ ಸಂಸದ ಸಾಗರ್ ಖಂಡ್ರೆ ಅವರ ಸೂಚನೆ ಮೇರೆಗೆ ಜಿಲ್ಲಾ ಘಟಕದ ಅಧ್ಯಕ್ಷ ಸಚಿನ್ ಮಲ್ಕಾಪುರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಒಕ್ಕೂಟದ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.