

ಬೀದರ್: ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ಒತ್ತಾಯಿಸಿದೆ.
ಸೇನೆಯ ಪದಾಧಿಕಾರಿಗಳು ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಅವರ ನೇತೃತ್ವದಲ್ಲಿ ನಗರದಲ್ಲಿ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
ಅಪ್ರಾಪ್ತರ ಮೇಲಿನ ಅತ್ಯಾಚಾರ ಘಟನೆಗಳು ಕಳವಳಕಾರಿಯಾಗಿವೆ ಎಂದು ಗಣೇಶ ಪಾಟೀಲ ಹೇಳಿದರು.
ಅತ್ಯಾಚಾರಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಭವಿಷ್ಯದಲ್ಲಿ ಇಂಥ ಘಟನೆಗಳು ನಡೆಯದಂತೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜಕುಮಾರ ಪಾಟೀಲ, ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಪ್ರಧಾನ ಸಂಚಾಲಕ ಸುಧಾಕರ್ ರಾಠೋಡ್, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ನಗರ ಘಟಕದ ಅಧ್ಯಕ್ಷ ಸಂತೋಷ್ ಪಾಟೀಲ, ಪ್ರಮುಖರಾದ ರಾಜಕುಮಾರ ಸ್ವಾಮಿ, ಸಂತೋಷ ಮಳಚಾಪುರೆ, ಸುದೀಪ್ ತೂಗಾವೆ, ಶಶಿಕಾಂತ ಅಷ್ಟೂರೆ, ಸಾಯಿ ಕಿರಣ, ಸಂದೀಪ್ ಪಾಟೀಲ, ಬಸವರಾಜ ದಾನಾ ಮತ್ತಿತರರು ಇದ್ದರು.