

ಭಾಲ್ಕಿ: ಹಲಬರ್ಗಾದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕಿ ಧನಲಕ್ಷ್ಮೀ ಹಲಸಿ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಪ್ರಶಸ್ತಿ ನೀಡಿ ಗೌರವಿಸಿದರು. ಧನಲಕ್ಷ್ಮೀ ಔರಾದ್, ಹುಮನಾಬಾದ್, ಭಾಲ್ಕಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಎರಡು ದಶಕದಿಂದ ಸೇವೆ ಸಲ್ಲಿಸುತ್ತಿದ್ದಾರೆ. ವೃತ್ತಿ ಜತೆಗೆ ಕಲೆ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ.