ದೆಹಲಿಯಲ್ಲಿ ವೀರಭದ್ರೇಶ್ವರ ಜಯಂತಿ 15ರಂದು

Shivayya Swamy 33
Published on

ಬೀದರ್: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ನವದೆಹಲಿಯಲ್ಲಿ ಸೆ.15 ರಂದು ವೀರಭದ್ರೇಶ್ವರ ಜಯಂತಿ ಹಾಗೂ ಕೇದಾರ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರ ಭವ್ಯ ಅಡ್ಡ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 2 ರಿಂದ ಸಂಜೆ 5 ರ ವರೆಗೆ ದೆಹಲಿಯ ಪಂಚಮುಖಿ ಶಿವಾಲಯ- ಬಿರ್ಲಾ ಮಂದಿರದಿಂದ ಪುರಾತನ ವಾಲ್ಮೀಕಿ ಮಂದಿರದ ವರೆಗೆ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಹಾಗೂ ಸಂಜೆ 5.30ಕ್ಕೆ ಭಾರತ ಮಂಟಪದಲ್ಲಿ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಜರುಗಲಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ತಿಳಿಸಿದ್ದಾರೆ.

ವೇದಿಕೆ ಸಮಾರಂಭದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಅವರಿಗೆ ಶ್ರೀ ವೀರಭದ್ರೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ದೇಶದ ವಿವಿಧೆಡೆಯ 80 ಶಿವಾಚಾರ್ಯರು, ಸಂತರು, ಗುರು ವಿರಕ್ತರು, ಕೇಂದ್ರ ಸಚಿವರು, ಗಣ್ಯರು ಭಾಗವಹಿಸುವರು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಪ್ರಸಾದ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net