ಬೆಂಗಳೂರಿನಲ್ಲಿ ಶಿಬಿರ 15ರಿಂದ

Ramesh dakulagi - Copy
Published on

ಬೀದರ್: ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ರಾಜ್ಯಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ ಸೆ.15ರಿಂದ ಮೂರು ದಿನ ಬೆಂಗಳೂರಿನ ಬಯೋಲಾಜಿಕಲ್ ಪಾಕ್೯ ಬಳಿಯ ಬನ್ನೆರಘಟ್ಟದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ. ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ನೇತೃತ್ವದಲ್ಲಿ ಮೂರು ದಿನ ವಿವಿಧ ಕಾರ್ಯಕ್ರಮ ನಡೆಯಲಿವೆ. ಸಮಿತಿಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net