

ಬೀದರ್: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಕಾಲಂನಲ್ಲಿ ಲಂಬಾಣಿ ಎಂದೇ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಬಸವರಾಜ ಪವಾರ್ ಮನವಿ ಮಾಡಿದ್ದಾರೆ. ಲಂಬಾಣಿ ಸಮುದಾಯದವರು ಉಪ ಜೀವನಕ್ಕಾಗಿ ವಿವಿಧೆಡೆ ಗೂಳೆ ಹೋಗಿದ್ದಾರೆ. ಎಲ್ಲರೂ ತಮ್ಮ ಸ್ವಗ್ರಾಮಕ್ಕೆ ಆಗಮಿಸಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಸಮಾಜದ ಸಂಖ್ಯೆ ನಿಖರವಾಗಿ ತಿಳಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.