ಬೆಂಗಳೂರು ಚಲೋ ವಿಶೇಷ ಸಭೆ 24ಕ್ಕೆ

Basavaraj Dhannur Photo-1 - Copy
Published on

ಬೀದರ್: ಬಸವ ಸಂಸ್ಕøತಿ ಅಭಿಯಾನ ಸಮಾರೋಪ ಅಂಗವಾಗಿ ಹಮ್ಮಿಕೊಂಡಿರುವ ‘ಬೆಂಗಳೂರು ಚಲೋ’ ನಿಮಿತ್ತ ನಗರದ ಐ.ಎಂ.ಎ. ಹಾಲ್‍ನಲ್ಲಿ ಬುಧವಾರ (ಸೆ. 24) ಮಧ್ಯಾಹ್ನ 1ಕ್ಕೆ ವಿಶೇಷ ಸಭೆ ಕರೆಯಲಾಗಿದೆ.

ಅ. 5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಬೀದರ್ ಜಿಲ್ಲೆಯಿಂದ ಬಸವ ಭಕ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದೊಯ್ಯಲು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಇದರ ರೂಪು ರೇಷೆ ಸಿದ್ಧಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಬೀದರ್ ಬಸವ ಸಂಸ್ಕøತಿ ಅಭಿಯಾನ ಸಮಿತಿಯ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಅಭಿಯಾನ ಯಶಸ್ವಿಯಾಗಿ ಜರುಗುತ್ತಿದ್ದು, ಸಮಾರೋಪ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 4 ರ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ನಾಡಿನ 500ಕ್ಕೂ ಹೆಚ್ಚು ಪೂಜ್ಯರು, ಮಠಾಧೀಶರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಬಸವಣ್ಣನವರನ್ನು ಸಾಂಸ್ಕøತಿಕ ನಾಯಕರನ್ನಾಗಿ ಘೋಷಿಸಿದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಯೂ ನೆರವೇರಲಿದೆ ಎಂದು ಹೇಳಿದ್ದಾರೆ.

ಸಮಾರೋಪ ಸಮಾರಂಭಕ್ಕೆ ಈಗಾಗಲೇ ಭರದ ಸಿದ್ಧತೆ ನಡೆದಿದೆ. ಜಿಲ್ಲೆಯ ಎಲ್ಲ ಪೂಜ್ಯರು, ಬಸವ ಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ಸಭೆಯಲ್ಲಿ ಪಾಲ್ಗೊಂಡು, ಸಮಾರಂಭದ ಯಶಸ್ವಿಗೆ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net