

ಬೀದರ್: ವಿಜಯದಶಮಿ ನಿಮಿತ್ತ ಭಾಲ್ಕಿ ತಾಲ್ಲೂಕಿನ ಖಾನಾಪುರದ ಮಲ್ಲಣ್ಣ ದೇವಸ್ಥಾನದಲ್ಲಿ ಅಕ್ಟೋಬರ್ 2 ರಂದು ಮಲ್ಲಣ್ಣ ದೇವರ ಪಲ್ಲಕ್ಕಿ ಹಾಗೂ ರಥೋತ್ಸವ ಜರುಗಲಿದೆ.
ಅಂದು ರಾತ್ರಿ 11.15ಕ್ಕೆ ರಥವು ಮುಖ್ಯ ದೇವಸ್ಥಾನದಿಂದ ಹೊರಟು, ಘೃತಮಾರಿ ತುಪ್ಪದ ಮಾಳವ್ವ (ಗುರುತ್ ಮಲ್ಲಮ್ಮ) ದೇವಸ್ಥಾನ, ಮುಖ್ಯಬೀದಿ, ಬೀದರ್- ಭಾಲ್ಕಿ ಮುಖ್ಯರಸ್ತೆ ಮೂಲಕ ಹಾಯ್ದು ಹನುಮಾನ ಮಂದಿರ ತಲುಪುವುದು. ಬಳಿಕ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿವೆ.
ಅ. 3 ರಂದು ಬೆಳಿಗ್ಗೆ 6.30ಕ್ಕೆ ಮಹಾ ಮಂಗಳಾರತಿಯೊಂದಿಗೆ ಉತ್ಸವ ಸಮಾರೋಪಗೊಳ್ಳಲಿದೆ.
ಪಲ್ಲಕ್ಕಿ ಹಾಗೂ ರಥೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮೈಲಾರ ಮಲ್ಲಣ್ಣ ದೇವಸ್ಥಾನದ ಆಡಳಿತಾಧಿಕಾರಿಯಾದ ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಮುಕುಲ್ ಜೈನ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ಮನವಿ ಮಾಡಿದ್ದಾರೆ.