ನಾರಂಜಾ ಕಾರ್ಖಾನೆ ಚುನಾವಣೆಗೆ ತಡೆಯಾಜ್ಞೆ

nssk - Copy
Published on

ಬೀದರ್: ತಾಲೂಕಿನ ಜನವಾಡ ಬಳಿಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್ಎಸ್ಎಸ್ಕೆ)ಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಶನಿವಾರ ನಡೆಯಬೇಕಿದ್ದ ಚುನಾವಣೆಗೆ ಕಲಬುರಗಿ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಚುನಾವಣೆ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದ್ದು, ಅಕ್ರಮ ನಡೆಯುತ್ತಿದೆ. ಚುನಾವಣೆಗೆ ತಡೆಯಾಜ್ಞೆ ನೀಡಬೇಕೆಂದು ಬಿಜೆಪಿಯ ಮುಖಂಡರಾದ ರಾಜಶೇಖರ ನಾಗಮೂರ್ತಿ, ದಯಾನಂದ ಶಾಸ್ತ್ರಿ, ಬಸವರಾಜ ಗುಣವಂತರಾವ ಅವರು ಕೋಟ್೯ ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಗೆ ನ್ಯಾಯಾಲಯ ತಡೆ ನೀಡಿದೆ ಎಂದು ವಕೀಲ ಗೌರೀಶ್ ಎಸ್. ಖಾಶೆಂಪುರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net