ಸ್ವಚ್ಛತೆಗೆ ಮೊದಲ ಆದ್ಯತೆ ಕೊಡಿ

Marakal Swachhata Awareness Programme - Copy
Published on

ಬೀದರ್: ಸ್ವಚ್ಛತೆಯೂ ಸೇವೆಯೇ ಆಗಿದೆ. ಹೀಗಾಗಿ ಎಲ್ಲರೂ ಸ್ವಚ್ಛತೆಗೆ ಮೊದಲ ಆದ್ಯತೆ ಕೊಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು.

ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತೆ ಮಹತ್ವ ಹಾಗೂ ಮಾದಕ ವ್ಯಸನಮುಕ್ತಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅ.2 ರವರೆಗೆ ಸ್ವಚ್ಛತೆಯೇ ಸೇವೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಿಡಿಒ ಉಮೇಶ ಜಾಬಾ ಮಾತನಾಡಿ, ಗ್ರಾಮ ಸ್ವಚ್ಛತೆಯಲ್ಲಿ ಸಮುದಾಯದ ಪಾತ್ರವೂ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಪರಿಸರ ಸ್ನೇಹಿ ಜೀವನಶೈಲಿ ರೂಢಿಸಿಕೊಳ್ಳಬೇಕು. ಪ್ಲಾಸ್ಟಿಕ್ ಬದಲು ಕೈಚೀಲ ಬಳಸಬೇಕು ಎಂದು ಸಲಹೆ ಮಾಡಿದರು.

ಗುಟ್ಕಾ, ಸಿಗರೇಟ್, ತಂಬಾಕು, ಸಾರಾಯಿ ಮೊದಲಾದ ಮಾದಕ ವಸ್ತುಗಳ ವ್ಯಸನಗಳು ಆರೋಗ್ಯ ಹಾಳುಗಡೆವುತ್ತವೆ. ಹೀಗಾಗಿ ಮಾದಕ ವಸ್ತುಗಳ ವ್ಯಸನಗಳಿಂದ ದೂರವಿರಬೇಕು. ಸ್ವಂತ ಆರೋಗ್ಯದ ಜತೆಗೆ ಸಮಾಜದ ಸ್ವಾಸ್ಥವನ್ನೂ ಕಾಪಾಡಬೇಕು ಎಂದು ಮನವಿ ಮಾಡಿದರು.

ಗ್ರಾಮದ ಮುಖಂಡರಾದ ಬಸವರಾಜ ಬುಯ್ಯಾ, ವೈಜಿನಾಥ ಬುಯ್ಯಾ ಮಾತನಾಡಿದರು. ಮೊಂಬತ್ತಿ ಬೆಳಗಿಸಿ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾಶಿನಾಥ ಜ್ಯಾಂತಿ, ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಗ್ರಾಮದ ಪ್ರಮುಖರು ಹಾಗೂ ಸಾರ್ವಜನಿಕರು ಹಾಜರಿದ್ದರು.

ಪಂಚಾಯಿತಿಯಿಂದ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ ಕೂಡ ಜರುಗಿತು. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net