ಜಿಲ್ಲಾದ್ಯಂತ ವಿಜಯದಶಮಿ ಸಂಭ್ರಮ

dasara 2
Published on

ಬೀದರ್: ನಗರ ಸೇರಿ ಜಿಲ್ಲಾದ್ಯಂತ ಗುರುವಾರ ವಿಜಯದಶಮಿ, ದಸರಾ ಉತ್ಸವ ಸಡಗರ ಸಂಭ್ರಮದೊಂದಿಗೆ ಆಚರಿಸಲಾಯಿತು. ದೇವಿ (ಭವಾನಿ ಮಾತಾ) ಮಂದಿರಗಳಲ್ಲಿ ವಿಶೇಷ ಪೂಜೆ ನಡೆದವು. ಹೊಸ ಬಟ್ಟೆ ತೊಟ್ಟವರು ಸಂಜೆ ಮಂದಿರಕ್ಕೆ ತೆರಳಿ ದೇವಿ ದರ್ಶನ ಪಡೆದರು. ಪರಸ್ಪರ ಬೆಳ್ಳಿ, ಬಂಗಾರ ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಕೋರಿದರು. ಅಲ್ಲಲ್ಲಿ ಸೀಮೋಲ್ಲಂಘನ ಕಾರ್ಯಕ್ರಮ ಜರುಗಿದವು.

ನಗರ, ಪಟ್ಟಣ ಜತೆಗೆ ಹಳ್ಳಿಗಳಲ್ಲೂ ಹಬ್ಬದ ಸಂಭ್ರಮ ಜೋರಾಗಿತ್ತು. ಗ್ರಾಮಸ್ಥರೆಲ್ಲ ಒಂದೆಡೆ ಸೇರಿ ಊರ ಹೊರವಲಯಕ್ಕೆ ತೆರಳಿ ಬನ್ನಿ ಮುಡಿಯುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ವೇಳೆ ಆಯುಧ ಪೂಜೆಯೂ ನಡೆಯಿತು. ಮನೆಯಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ ಬಂಧು-ಮಿತ್ರರನ್ನು ಆಹ್ವಾನಿಸಿ ಊಟದ ಸವಿರುಚಿ ಹಂಚಿಕೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net