

ಬೀದರ್: ರಾಜ್ಯೋತ್ಸವ ಪ್ರಯುಕ್ತ ನೀಡಲಾಗುವ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದಿಂದ ಅರ್ಜಿ ಆಹ್ವಾನಿಸಲಾಗಿದೆ.
70ನೇ ರಾಜ್ಯೋತ್ಸವದ ಅಂಗವಾಗಿ ಈ ಬಾರಿ ಸಾಮಾಜಿಕ, ಶೈಕ್ಷಣಿಕ, ಕಲೆ, ಸಾಹಿತ್ತಿಕ, ಪತ್ರಿಕಾ ರಂಗ, ನ್ಯಾಯಾಂಗ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ 70 ಜನರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ಆಸಕ್ತರು ಎರಡು ಪುಟಗಳ ಸಾಧನೆಯ ಮಾಹಿತಿ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅಧ್ಯಕ್ಷರು, ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ, ಅಲ್ಲಮಪ್ರಭುನಗರ, ಗುಂಪಾ, ಬೀದರ್ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ ಎಂದು ಹೇಳಿದ್ದಾರೆ.