ದೇಶದ್ರೋಹದ ಪ್ರಕರಣ ದಾಖಲಿಸಿ

DSS
Published on

ಬೀದರ್: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ರಾಕೇಶ್ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ಮತ್ತು ನ್ಯಾಯಾಂಗದ ವಿರುದ್ಧ ಧಿಕ್ಕಾರ ಕೂಗುವರನ್ನು ರಾಷ್ಟ್ರದ್ರೋಹಿಗಳೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಶೂ ಎಸೆಯಲು ಯತ್ನಿಸಿದ ಕಿಶೋರ್ ವಿರುದ್ಧ ಕೇಂದ್ರ ಸರ್ಕಾರವು ತಕ್ಷಣ ಕ್ರಮಕೈಗೊಂಡು ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಸಂವಿಧಾನ ವಿರೋಧಿ ಚಟವಟಿಕೆ ಮಾಡುವವರ ವಿರುದ್ಧವಾಗಿ ಕಠಿಣ ಕಾನೂನು ರೂಪಿಸಬೇಕೆಂದು ಆಗ್ರಹಿಸಿದರು.

ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಆರ್ಪಿಐ (ಅಂಬೇಡ್ಕರ್) ಪಕ್ಷದ ರಾಜ್ಯಾಧ್ಯಕ್ಷ ಮಹೇಶ ಗೋರನಾಳಕರ್, ಪ್ರಮುಖರಾದ ರಾಜಕುಮಾರ ಮೂಲಭಾರತಿ, ಬಾಬುರಾವ ಹೊನ್ನಾ, ಮುಬಾಶಿರ್ ಸಿಂಧೆ, ಅರುಣ ಪಟೇಲ್, ವಹೀದ್ ಲಖನ್, ಡಾ.ಕಾಶಿನಾಥ ಚೆಲವಾ, ಶಿವರಾಜ ತಡಪಳ್ಳಿ, ಪ್ರಕಾಶ ರಾವಣ, ರಾಜಪ್ಪ ಗೂನ್ನಳ್ಳಿಕರ್, ಮಾಣಿಕ ಖಾನಾಪುರೆ, ವಿನೋದ ಬಂದಗೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net