ಪಿಡಿಒ ಮೇಲೆ ಹಲ್ಲೆ ಕ್ರಮಕ್ಕೆ ಆಗ್ರಹ

Markal PDO Umesh Jaba
Published on

ಬೀದರ್: ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಮಾಡಮಗೇರಿ ಪಿಡಿಒ ಜಯಗೌಡ ಸಿದ್ಧಗೌಡ ಪಾಟೀಲ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರಾಜ್ಯ ಪಿಡಿಒ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘದ ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಉಮೇಶ ಕೆ. ಜಾಬಾ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಸಚಿವ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಿದ್ದಾರೆ.

ಕಾನೂನು ಬಾಹಿರ ಕೆಲಸಕ್ಕೆ ಒಪ್ಪದಿದ್ದಾಗ ನಾಲ್ವರು ಆರೋಪಿಗಳು ಪಿಡಿಒ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಬೇಕು. ಅಧಿಕಾರಿಗಳ ರಕ್ಷಣೆ ಕಾಯ್ದೆ ಜಾರಿಗೊಳಿಸಬೇಕು. ಹಲ್ಲೆಗೊಳಗಾದ ಪಿಡಿಒಗೆ ವೈದ್ಯಕೀಯ ನೆರವು ಹಾಗೂ ನೈತಿಕ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net