

ಬೀದರ್: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಜಿಲ್ಲಾ ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.
ರಾಕೇಶ್ ಕಿಶೋರ್ ಎನ್ನುವವರು ಶೂ ಎಸೆಯಲು ಪ್ರಯತ್ನಿಸಿದ ಪ್ರಕರಣ ಮುಖ್ಯ ನ್ಯಾಯಮೂರ್ತಿ ಹಾಗೂ ಇಡೀ ನ್ಯಾಯಾಂಗ ವ್ಯವಸ್ಥೆಯ ಗೌರವಕ್ಕೆ ಧಕ್ಕೆ ತಂದಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಷನ್ಮುಖಯ್ಯ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.