ಶಾಸಕ ಪ್ರಭು ಚವ್ಹಾಣ್‌ಗೆ ಸನ್ಮಾನ

Chavan Sanman - Copy
Published on

ಔರಾದ್: ಇಲ್ಲಿನ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ಜರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸರುಬಾಯಿ ಘೂಳೆ ಹಾಗೂ ಸದಸ್ಯರು ಶುಕ್ರವಾರ ಪಟ್ಟಣದಲ್ಲಿ ಶಾಸಕ ಪ್ರಭು ಚವ್ಹಾಣ ಅವರನ್ನು ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಪಪಂ ಅಧ್ಯಕ್ಷರು ಮತ್ತು ಸದಸ್ಯರು, ಔರಾದ್ ಪಟ್ಟಣದ ಸಮಗ್ರ ಅಭಿವೃದ್ಧಿಯ ಕನಸನ್ನು ಹೊತ್ತುಕೊಂಡು ಕೆಲಸ ಮಾಡುತ್ತಿರುವ ಶಾಸಕರು ಪುರಸಭೆಯಾಗಿಸಲು ನಿರಂತರ ಶ್ರಮ ವಹಿಸಿದ್ದಾರೆ. ಸರ್ಕಾರಕ್ಕೆ ಅನೇಕ ಬಾರಿ ಪತ್ರಗಳನ್ನು ಬರೆದಿದ್ದಾರೆ. ಮುಖ್ಯಮಂತ್ರಿ, ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಿ ಔರಾದ್ ಪಟ್ಟಣವನ್ನು ಪುರಸಭೆಯಾಗಿಸುವ ಅನಿವಾರ್ಯತೆ ಎಷ್ಟಿದೆ ಎನ್ನುವ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅವರು ಬೆನ್ನುಬಿಡದೇ ಸತತ ಪ್ರಯತ್ನ ವಹಿಸಿರುವ ಕಾರಣ ಸರ್ಕಾರವು ಪುರಸಭೆಯಾಗಿಸಲು ನಿರ್ಣಯಿಸಿದೆ. ಅವರು ಮಾಡಿರುವ ಪ್ರಯತ್ನಗಳು ಎಲ್ಲರ ಕಣ್ಣೆದುರಿಗಿವೆ ಎಂದರು.

ಪಟ್ಟಣದ ಸಮಗ್ರ ಅಭಿವೃದ್ಧಿಗೆ ತಯಾರಿಸಿದ ಮಾಸ್ಟರ್ ಪ್ಲಾನ್‌ಗೆ ಮಂಜೂರು ಮಾಡಿಸಿದ್ದಾರೆ. ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಎಲ್ಲ ಸೌಕರ್ಯಗಳನ್ನು ಒದಗಿಸಿದ್ದು, ಪ್ರಮುಖ ಬೀದಿಗಳಲ್ಲಿ ಸುಂದರ ವಿದ್ಯುತ್ ದೀಪಗಳನ್ನು ಅಳವಡಿಸಿ ಪಟ್ಟಣದ ಸೌಂಧರ್ಯ ಹೆಚ್ಚಿಸಿದ್ದಾರೆ. ಟ್ರೀ ಪಾರ್ಕ್ ನಿರ್ಮಾಣ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿವೆ. ಪುರಸಭೆಯಾದ ನಂತರ ಸರ್ಕಾರದಿಂದ ಹೆಚ್ಚಿನ ಅನುದಾನ ಬರಲಿದ್ದು, ಸಾರ್ವಜನಿಕರಿಗೂ ಸಾಕಷ್ಟು ಅನುಕೂಲಗಳಾಗಲಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಧೊಂಡಿಬಾ ನರೋಟೆ, ಗುಂಡಪ್ಪ ಮುಧಾಳೆ, ಮುಖಂಡರಾದ ಕೇರಬಾ ಪವಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net