

ಬೀದರ್: ಎಲ್ಲ ವರ್ಗ ಹಾಗೂ ವೃಂದಗಳ ರಾಜ್ಯ ಸರ್ಕಾರಿ ನೌಕರರ ಸೇವಾ ಅವಧಿಯನ್ನು ಎರಡು ವರ್ಷ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ಕಿಸಾನ್ ಮೋರ್ಚಾದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.
ಈ ಕುರಿತು ಅವರು ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಬಡ್ತಿಯಲ್ಲಿ ಮೀಸಲು ಸೌಲಭ್ಯ ಇದೆ. ಆದರೆ, ಸೇವಾ ಅವಧಿ ಕಡಿಮೆ ಇರುವ ಕಾರಣ ಬಡ್ತಿಯಿಂದ ವಂಚಿತರಾಗುವಂತಾಗಿದೆ ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲ ವರ್ಗಗಳ ಎಲ್ಲ ವಂದದ ನೌಕರರ ಸೇವಾ ಅವಧಿಯನ್ನು ವಿಶೇಷ ಪ್ರಕರಣಗಳ ಅಡಿಯಲ್ಲಿ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.