25 ಕೆಜಿ ಗಾಂಜಾ ಜಪ್ತಿ

bidar photos
Published on

ಬೀದರ್: ಅಕ್ರಮವಾಗಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ 24.92 ಲಕ್ಷ ಮೌಲ್ಯದ 24.920 ಕೆಜಿ ಗಾಂಜಾ ಜಪ್ತಿ ಮಾಡಿ ಒಬ್ಬನನ್ನು ಬಂಧಿಸಲಾಗಿದೆ.

ಕಮಠಾಣ ರಸ್ತೆಯ ಕೆಇಬಿ ಫಂಕ್ಷನ್ ಹಾಲ್ ಎದುರಿನ ಖಾಲಿ ಜಾಗದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಬಂಧಿತ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎನ್ಡಿಪಿಎಸ್ ಅಡಿ ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಶಿವನಗೌಡ ಪಾಟೀಲ್, ಠಾಣೆ ಪಿಐ ಆನಂದರಾವ್ ಎಸ್.ಎನ್., ಸಿಬ್ಬಂದಿ ಸಂಜುಕುಮಾರ, ಅನಿಲ್, ಸುಧಾಕರ, ರಾಜಕುಮಾರ, ಇಸ್ಮಾಯಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net