ಔರಾದ್ ನಲ್ಲಿ ಬೃಹತ್ ಪ್ರತಿಭಟನೆ 18ರಂದು

Prabhu Chavan - Copy
Published on

ಔರಾದ್: ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ವಿತರಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಅ.18ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಬೆಳಗ್ಗೆ 10ಕ್ಕೆ ಎಪಿಎಂಸಿ ವೃತ್ತದಿಂದ ಆರಂಭವಾಗುವ ರ್ಯಾಲಿ ಕನ್ನಡಾಂಬೆ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ಚೌಕ್ ಹತ್ತಿರ ಸಮಾವೇಶಗೊಂಡ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ದಾಖಲೆ ಮಳೆಯಾಗಿದ್ದರಿಂದ ಬಹುತೇಕ ಬೆಳೆಗಳು ಸಂಪೂರ್ಣ ನೀರುಪಾಲಾಗಿವೆ. ಜಾನುವಾರುಗಳು ಅಸುನೀಗಿದ್ದು, ಮನೆ, ರಸ್ತೆ, ಸೇತುವೆ ಇತರ ಸೌಲಭ್ಯಗಳು ಹಾಳಾಗಿವೆ. ಔರಾದ್ ಹಾಗೂ ಕಮಲನಗರ ತಾಲೂಕುಗಳಲ್ಲಿ ಕಲ್ಯಾಣ ಕರ್ನಾಟಕದಲ್ಲೇ ಹೆಚ್ಚಿನ ಹಾನಿ ಸಂಭವಿಸಿದೆ. ಶೀಘ್ರ ಬೆಳೆ ಪರಿಹಾರ ಬಿಡುಗಡೆ ಮಾಡಿ ರೈತರ ನೋವುಗಳಿಗೆ ಸ್ಪಂದಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net