

ಬೀದರ್: ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರ ಉದ್ಯೋಗದ ಹಕ್ಕು ಸಂರಕ್ಷಣೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಆಗ್ರಹಿಸಿದೆ.
ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದ ಸಮಿತಿ ಪ್ರಮುಖರು, 2025-26ರ ಶೈಕ್ಷಣಿಕ ಸಾಲಿನಲ್ಲಿ ಬೇಷರತ್ ಸೇವೆಯಲ್ಲಿ ಮುಂದುವರಿಸಬೇಕು. ಯುಜಿಸಿ ನಿಯಮಾವಳಿಯನ್ನು 2018ರ ಪೂರ್ವದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಅನ್ವಯಿಸುವಂತೆ ಯಥಾಸ್ಥಿತಿಯಲ್ಲಿ ಸೇವೆಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಬೇಡಿಕೆ ಸಂಬಂಧ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಕಾಂತ ನಾರಾಯಣಪುರೆ, ಪ್ರಮುಖರಾದ ಶರಣಪ್ಪ ಬಗದೂರೆ, ನಾಮದೇವ, ಶ್ವೇತಾ, ಪ್ರಮೀಳಾ, ದೇವರಾಜ ಪಾಟೀಲ್, ದಶರಥ ಮೇತ್ರೆ, ಮಲ್ಲಿಕಾರ್ಜುನ ಬಿರಾದಾರ್, ಸುನೀಲ ಇತರರಿದ್ದರು.