

ಬೀದರ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುಮ್ಮಕ್ಕಿನಿಂದ ದುಷ್ಕರ್ಮಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿ, ಬೆದರಿಕೆ ಹಾಕಿರುವುದನ್ನು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ. ತೀವ್ರವಾಗಿ ಖಂಡಿಸಿದ್ದಾರೆ.
ದುಷ್ಕರ್ಮಿಗಳು ಖರ್ಗೆ ಹಾಗೂ ಅವರ ಕುಟುಂಬದವರ ಬಗ್ಗೆ ಬಳಸಿರುವ ಕೀಳುಮಟ್ಟದ ಪದಗಳು ನಾಗರಿಕ ಸಮಾಜ ತಲೆ ತಗ್ಗಿಸುವಂಥವು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯ ಹಾಗೂ ರಾಷ್ಟ್ರಕ್ಕೆ ಖರ್ಗೆ ಕುಟುಂಬದ ಕೊಡುಗೆ ಅಪಾರವಾಗಿದೆ. ಅವರು ಇಂಥ ಗೊಡ್ಡು ಬೆದರಿಕೆಗಳಿಗೆ ಅಂಜಬೇಕಿಲ್ಲ. ದೇಶದ ಜನ ಅವರೊಂದಿಗೆ ಇದ್ದಾರೆ ಎಂದು ತಿಳಿಸಿದ್ದಾರೆ.
ಸಚಿವರನ್ನು ನಿಂದಿಸಿದವರು ಹಾಗೂ ಅವರ ಹಿಂದಿರುವವರನ್ನು ಕೂಡಲೇ ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.