ಆರೆಸ್ಸೆಸ್ ನಿಷೇಧಕ್ಕೆ ಬೆಂಬಲ

vishnuvardhan valdoddi
Published on

ಬೀದರ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ದ ಚಟುವಟಿಕೆ ನಿಷೇಸಬೇಕೆಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಪೂರ್ಣ ಬೆಂಬಲವಿದೆ ಎಂದು ಭೀಮಸೇನೆ ರಾಜ್ಯ ಕಾರ್ಯಾಧ್ಯಕ್ಷ ವಿಷ್ಣುವರ್ಧನ್ ವಾಲ್ದೊಡ್ಡಿ ಹೇಳಿದರು.

ಸಚಿವರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಮಹಾರಾಷ್ಟ್ರ ಸೊಲ್ಲಾಪುರದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಆರೆಸ್ಸೆಸ್ ಬ್ಯಾನ್ ಮಾಡಬೇಕು. ಇಲ್ಲವಾದರೆ ದಲಿತಪರ ಸಂಘಟನೆಗಳಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

ಪ್ರಮುಖರಾದ ಸಂದೀಪ್, ಪುರುಷೋತ್ತಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net