ಶಿಕ್ಷಕರ ಅರ್ಹತಾ ಪರೀಕ್ಷೆ ಕಾರ್ಯಾಗಾರ 26ಕ್ಕೆ

Published on

ಬೀದರ್: ನಿರಂಜನ್ ಚಾರಿಟಬಲ್ ಟ್ರಸ್ಟ್ ಸಂಚಾಲಿತ ಸ್ಪರ್ಧಾಗುರು ಐಎಎಸ್ ಆ್ಯಂಡ್ ಕೆಎಎಸ್ ಸ್ಟಡಿ ಸೆಂಟರ್ ನಗರದ ಗುಂಪಾ ರಸ್ತೆಯಲ್ಲಿನ ಬೆಲ್ದಾಳೆ ಪೆಟ್ರೋಲ್ ಬಂಕ್ ಹಿಂದುಗಡೆಯ ಬಸವ ಪಿ.ಯು. ಕಾಲೇಜಿನಲ್ಲಿ ಅ. 26 ರಂದು ಬೆಳಿಗ್ಗೆ 10.30ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದೆ.

ಕಾರ್ಯಾಗಾರದಲ್ಲಿ ಶಿಶು ಮನೋವಿಜ್ಞಾನ, ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಕನ್ನಡ, ಇಂಗ್ಲಿಷ್ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಅಭ್ಯರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ. 150 ಅಂಕಗಳ ಮಾದರಿ ಪರೀಕ್ಷೆಯೂ ನಡೆಯಲಿದೆ ಎಂದು ಕೇಂದ್ರದ ಮುಖ್ಯಸ್ಥ ಅಮೀತ್ ಸೋಲಪುರ ತಿಳಿಸಿದ್ದಾರೆ.

ಜಿಲ್ಲೆಯ ಅಭ್ಯರ್ಥಿಗಳಿಗೆ ನೆರವಾಗುವುದು ಕಾರ್ಯಾಗಾರ ಆಯೋಜನೆ ಉದ್ದೇಶವಾಗಿದೆ. ಅಭ್ಯರ್ಥಿಗಳು ಕಾರ್ಯಾಗಾರದ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net