ಬೀದರ್: ವಿನ್ನರ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ನಗರದ ಹೊಸ ಬಸ್ ನಿಲ್ದಾಣ ಸಮೀಪದ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 26 ರಂದು ಬೆಳಿಗ್ಗೆ 10ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತು ವಿಶೇಷ ಕಾರ್ಯಾಗಾರ ಹಾಗೂ ಮಾದರಿ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದಲ್ಲಿ ವಿಜಯಪುರ ಹಾಗೂ ಧಾರವಾಡದ ಖ್ಯಾತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದಾರೆ. ಪರೀಕ್ಷೆ ಬರೆಯಲಿರುವ ಜಿಲ್ಲೆಯ ಅಭ್ಯರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆಯಬೇಕು ಎಂದು ಕೇಂದ್ರದ ನಿರ್ದೇಶಕಿ ಪೂಜಾ ಹನುಮಂತರಾವ್ ಪಾಟೀಲ ಮನವಿ ಮಾಡಿದ್ದಾರೆ.
ಕಾರ್ಯಾಗಾರದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 9538360707 ಅಥವಾ 8970850873 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.