‘ಮಾರುತ'ದಲ್ಲಿ ಶಿವಯ್ಯ ಸ್ವಾಮಿ ನಟನೆ

Maroot Film Shooting- Shivayya Swamy - Copy
Published on

ಬೀದರ್: ಎಸ್. ನಾರಾಯಣ್ ನಿರ್ದೇಶನದ ‘ಮಾರುತ' ಚಿತ್ರದ ಪಾತ್ರವೊಂದರಲ್ಲಿ ನಟಿಸುವ ಮೂಲಕ ಜಿಲ್ಲೆಯವರೇ ಆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಗಮನ ಸೆಳೆದಿದ್ದಾರೆ.

ಚಿತ್ರದಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗ್ರಾಮದ ಪ್ರಮುಖರೊಬ್ಬರ ಪಾತ್ರದಲ್ಲಿ ನಟಿಸಿದ್ದಾಗಿ ಶಿವಯ್ಯ ಸ್ವಾಮಿ ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ದೇಸಾಯಿ ಅವರ 108 ಬಾಗಿಲುಗಳ ಮನೆಯಲ್ಲಿ ಎರಡು ದಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಚಿತ್ರದಲ್ಲಿ ಬೀದರ್‍ನ ಪ್ರವೀಣ್ ಸ್ವಾಮಿ, ನಾಗರಾಜ ಮಠ, ರೇವಣಸಿದ್ದಯ್ಯ ಮಠಪತಿ ಹಾಗೂ ಕೇದಾರನಾಥ ಅವರು ಶಾಸ್ತ್ರಿಗಳ ಪಾತ್ರ ನಿರ್ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮೂರು ದಶಕದಿಂದ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿರುವ ಶಿವಯ್ಯ ಸ್ವಾಮಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಪಾತ್ರ ನಿರ್ವಹಿಸಿರುವುದು ವಿಶೇಷವಾಗಿದೆ.

ಮಾರುತ ಚಿತ್ರದಲ್ಲಿ ದುನಿಯಾ ವಿಜಯ್, ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿದ್ದಾರೆ. ಕ್ರೆಜಿ ಸ್ಟ್ರಾರ್ ರವಿಚಂದ್ರನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೃಂದಾ ನಾಯಕಿಯಾಗಿದ್ದಾರೆ.

ನಿಶ್ಚಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ ಲೋಹಿತಾಶ್ವ, ಪ್ರಮೋದ್ ಶೆಟ್ಟಿ ಮೊದಲಾದವರು ಚಿತ್ರದಲ್ಲಿದ್ದಾರೆ. ಪಿ.ಕೆ.ಎಚ್. ದಾಸ್ ಛಾಯಾಚಿತ್ರಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನವಿದೆ. ಚಿತ್ರಕ್ಕೆ ಕೆ. ಮಂಜು ಹಾಗೂ ರಮೇಶ್ ಯಾದವ್ ಬಂಡವಾಳ ಹೂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net