

ಬೀದರ್: ಅತಿವೃಷ್ಟಿ ಹಾಗೂ ಪ್ರವಾಹದ ಬೆಳೆ ಹಾನಿ ಪರಿಹಾರ ನೀಡಲು ವಿಳಂಬ ಮಾಡಿದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ತಿಳಿಸಿದ್ದಾರೆ.
ನಿರಂತರ ಮಳೆಯಿಂದ ಜಿಲ್ಲೆಯಲ್ಲಿ ಬಹಳಷ್ಟು ಹಾನಿಯಾಗಿದೆ. ಬಹುತೇಕ ಬೆಳೆಗಳು ಹಾನಿಯಾಗಿವೆ. ಆದರೆ ಈವರೆಗೆ ಸರ್ಕಾರದಿಂದ ಯಾವುದೇ ಪರಿಹಾರ ನೀಡಲ್ಲ. ದೀಪಾವಳಿ ಹಬ್ಬಕ್ಕೂ ಮೊದಲು ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವು ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದರೂ ಕ್ರಮಕೈಗೊಂಡಿಲ್ಲ. ಇದೀಗ ಅ.30ರೊಳಗೆ ಪರಿಹಾರ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿದಂತೆ ಪರಿಹಾರ ನೀಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.