ಬೆಂಗಳೂರು ದಕ್ಷಿಣ ಪ್ರಥಮ

Table Tennis - Copy
Published on

ಬೀದರ್: ನಗರದ ಅಲ್ಲಮಾ ಇಕ್ಬಾಲ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಟೇಬಲ್ ಟೆನಿಸ್ ಟೂರ್ನಿಗೆ ಶುಕ್ರವಾರ ತೆರೆ ಬಿದ್ದಿತು.

ಟೂರ್ನಿಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ತಂಡಗಳು ಪ್ರಥಮ ಸ್ಥಾನ ಗಳಿಸಿ ಗಮನ ಸೆಳೆದವು.

ವಿದ್ಯಾರ್ಥಿಗಳ ವಿಭಾಗದಲ್ಲಿ ಮೈಸೂರು ಹಾಗೂ ವಿದ್ಯಾರ್ಥಿನಿಯರ ವಿಭಾಗದಲ್ಲಿ ಬೆಳಗಾವಿ ತಂಡಗಳು ದ್ವಿತೀಯ ಸ್ಥಾನ ಪಡೆದವು.

ಕಾಲೇಜಿನಲ್ಲಿ ಸಂಜೆ ನಡೆದ ಸಮಾರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಹಾಗೂ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ವತಿಯಿಂದ ತೀರ್ಪುಗಾರರಿಗೆ ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಪ್ರಾಚಾರ್ಯ ಎಸ್.ಎಸ್. ಖಾದ್ರಿ, ಅಲ್ಲಮಾ ಇಕ್ಬಾಲ್ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಖಾಜಾ ಪಟೇಲ್, ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಉಪನ್ಯಾಸಕರ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಜಿಲ್ಲೆಯ

ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. ಓಂಪ್ರಕಾಶ ದಡ್ಡೆ ನಿರೂಪಿಸಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಅಲ್ಲಮಾ ಇಕ್ಬಾಲ್ ಪದವಿಪೂರ್ವ ವಿಜ್ಞಾನ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಟೂರ್ನಿ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net