ಆಯೋಗದ ಅಧ್ಯಕ್ಷರಾಗಿ ಕೋಸಂಬೆ ನೇಮಕ

Shashidhar Kosambe
Published on

ಭಾಲ್ಕಿ: ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕೆ.ನಾಗಣ್ಣ ಗೌಡ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅ.20ರಿಂದ ಅನ್ವಯವಾಗುವಂತೆ ಪ್ರಸ್ತುತ ಖಾಲಿ ಇರುವ ಅಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೋಸಂಬೆ ಅವರನ್ನು ರಾಜ್ಯಪಾಲರ ಆದೇಶಾನುಸಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರದ ಅನ ಕಾರ್ಯದರ್ಶಿ ಉಮಾದೇವಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net