ಡಾ.ಖದೀರ್ ಅಭಿನಂದನಾ ಸಮಾರಂಭ 4ರಂದು

Abdul Khadeer
Published on

ಬೀದರ್: ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಸರ್ ಸೈಯ್ಯದ್ ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ ಪುರಸ್ಕೃತ ಶಿಕ್ಷಣ ತಜ್ಞ, ಶಾಹೀನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಅವರ ಅಭಿನಂದನಾ ಸಮಾರಂಭ ಮಂಗಳವಾರ (ನ.4)ಮಧ್ಯಾಹ್ನ 3ಕ್ಕೆ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಡಾ.ಸಿದ್ದರಾಮ ಶರಣರು ಬೆಲ್ದಾಳ, ಪೂಜ್ಯ ಡಾ.ಗಂಗಾಂಬಿಕೆ ಅಕ್ಕ, ಮಹ್ಮದ್ ತಸದುಕ್, ಮೌಲಾನಾ ಅಬ್ದುಲ್ ಗನಿ ಖಾನ್ಸಾಬ್, ಭಂತೆ ಜ್ಞಾನಸಾಗರ, ಫಾದರ್ ವಿಲ್ಸನ್ ಸೆಂಟ್ ಜೋಸೆಫ್ ಸಾನ್ನಿಧ್ಯ, ಬಸವರಾಜ ಜಾಬಶೆಟ್ಟಿ ಸಾನ್ನಿಧ್ಯ ವಹಿಸುವರು. ಪೌರಾಡಳಿತ ಸಚಿವ ರಹೀಮ್ ಖಾನ್ ಉದ್ಘಾಟಿಸುವರು. ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಇತರರು ಪಾಲ್ಗೊಳ್ಳುವರು. ಜಿಲ್ಲೆಯ ಶಿಕ್ಷಣ ಪ್ರೇಮಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಪ್ರಗತಿಪರ ಚಿಂತಕರು, ಹೋರಾಟಗಾರರು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net