ಶಿವಶರಣ ಹರಳಯ್ಯ ನಾಟಕ ಪ್ರದರ್ಶನ 9ರಂದು

Basavaraj Dhannur Photo-1
Published on

ಬೀದರ್: ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಗರದ ಕೆ.ಇ.ಬಿ. ರಸ್ತೆಯಲ್ಲಿ ಇರುವ ಐ.ಎಂ.ಎ. ಹಾಲ್‌ನಲ್ಲಿ ನ. 9ರಂದು ಸಂಜೆ 6ಕ್ಕೆ ಶಿವಶರಣ ಹರಳಯ್ಯ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ ಉದ್ಘಾಟಿಸುವರು. ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂದೆ, ಡಾ. ವಿಜಯಶ್ರೀ ಬಶೆಟ್ಟಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಅಧ್ಯಕ್ಷ ನಾಗೇಶ ಪಾಟೀಲ, ಗಾನಯೋಗಿ ಪಂಚಾಕ್ಷರಿ ಗವಾಯಿ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾಳೆ, ಉದ್ಯಮಿ ಜೈರಾಜ ಖಂಡ್ರೆ, ರಂಗ ಕರ್ಮಿ ಸಂಗ್ರಾಮ ಎಂಗಳೆ, ಹರಳಯ್ಯ ಸಮಾಜದ ಜಿಲ್ಲಾ ಅಧ್ಯಕ್ಷ ಸುಭಾಷ್ ಹಮಿಲಾಪುರ, ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟಿಳ್ಳೆಕರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಬಸವಾನುಯಾಯಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾಟಕ ವೀಕ್ಷಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net