ಶಿವಕುಮಾರ ಸ್ವಾಮೀಜಿ ಜಯಂತಿ 11ರಿಂದ

Shivkumar Swamiji Photo
Published on

ಬೀದರ್: ನಗರದ ಸಿದ್ಧಾರೂಢ ಮಠದಲ್ಲಿ ನ. 11 ರಿಂದ 15 ರ ವರೆಗೆ ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ 82ನೇ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಪ್ರತಿ ದಿನ ಬೆಳಿಗ್ಗೆ 6.30 ರಿಂದ 7 ರ ವರೆಗೆ ಜಪ, ಧ್ಯಾನ, ಬೆಳಿಗ್ಗೆ 8 ರಿಂದ 10 ಹಾಗೂ ಸಂಜೆ 6 ರಿಂದ 8 ರ ವರೆಗೆ ಪ್ರವಚನ ನಡೆಯಲಿದೆ.

ನಾಡಿನ ಅನೇಕ ಪೂಜ್ಯರು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿದ್ದಾರೆ ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ತಿಳಿಸಿದ್ದಾರೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಶ್ರೀಗಳ ದರ್ಶನಾಶೀರ್ವಾದ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net