ಸಿದ್ಧೇಶ್ವರ ದೇವಸ್ಥಾನ ಗೋಪುರ ಕಳಸಾರೋಹಣ, ಲಕ್ಷದೀಪೋತ್ಸವ 12ರಂದು

Honnikeri Siddheshwar - Copy
Published on

ಬೀದರ್: ತಾಲ್ಲೂಕಿನ ಹೊನ್ನಿಕೇರಿ ಗ್ರಾಮದ ಸಿದ್ಧೇಶ್ವರ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮ ನವೆಂಬರ್ 12 ರಂದು ನಡೆಯಲಿದೆ.

ಅಂದು ಬೆಳಿಗ್ಗೆ 10ಕ್ಕೆ ಸಿದ್ಧೇಶ್ವರ ಮಹಾದ್ವಾರದಿಂದ 1,008 ಕುಂಭ ಕಳಸದೊಂದಿಗೆ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗತ್ಪಾದರ ಭವ್ಯ ಮೆರವಣಿಗೆ ಜರುಗಲಿದೆ ಎಂದು ಮುಖಂಡ ಸಂಗಮೇಶ ಪಾಟೀಲ ಮಳಚಾಪುರ ತಿಳಿಸಿದ್ದಾರೆ.

ಮಧ್ಯಾಹ್ನ 2ಕ್ಕೆ ರಂಭಾಪುರಿ ಜಗದ್ಗುರುಗಳು ಕಳಸಾರೋಹಣ ನೆರವೇರಿಸಲಿದ್ದಾರೆ. ಹಲಬರ್ಗಾ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದಾರೆ. ಸಂಜೆ 4ಕ್ಕೆ ಧರ್ಮಸಭೆ, ಸಂಜೆ 6ಕ್ಕೆ ಲಕ್ಷ ದೀಪೋತ್ಸವ ನಡೆಯಲಿದೆ. ನಾಡಿನ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದಲ್ಲಿ ನ. 4 ರಿಂದ ಸಪ್ತಾಹ ಆರಂಭವಾಗಿದ್ದು, ನ. 10 ರವರೆಗೆ ಜರುಗಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ದೇವಸ್ಥಾನ, ಗೋಪುರ, ದ್ವಾರಗಳಿಗೆ ಬಣ್ಣ ಬಳಿದು ಅಲಂಕಾರ ಮಾಡಲಾಗಿದೆ. ಅಂತಿಮ ಹಂತದ ಸಿದ್ಧತಾ ಕಾರ್ಯಗಳು ನಡೆದಿವೆ ಎಂದು ತಿಳಿಸಿದ್ದಾರೆ.

ಗೋಪುರ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net