ಸಂತೋಷಗೆ ಕನ್ನಡ ಸೇವಾ ರತ್ನ ಪ್ರಶಸ್ತಿ

Santosh - Copy
Published on

ಬೀದರ್: ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಂಸ್ಕೃತಿಕ ಸಂಸ್ಥೆ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದಿಂದ ಕನ್ನಡ ರಾಜ್ಯೋತ್ಸವ ನಿಮಿತ್ತ ಕೊಡಮಾಡುವ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಜಿಲ್ಲಾ ಗುಪ್ತ ವಾರ್ತೆ ಘಟಕದ ಮುಖ್ಯ ಪೇದೆ ಸಂತೋಷ ಮಹಾರಾಜ ಅವರನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11ಕ್ಕೆ ನಗರದ ಪೂೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಶ್ರೀ ಕೇತಕಿ ಸಂಸ್ಥೆ ಅಧ್ಯಕ್ಷ ಹಣ್ಮು ಪಾಜಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net