

ಗಂಗೊಳ್ಳಿ: ಪಠ್ಯದ ಜತೆ ಮಾನಸಿಕ ದೃಢತೆ ಸಿಗಬೇಕಾದರೆ ಶಾರೀರಿಕ ಕೆಲಸ, ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ) ಕೋಟೇಶ್ವರ ಸಹಯೋಗದಲ್ಲಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ಶುಕ್ರವಾರ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ ಕುಸ್ತಿ ಟೂರ್ನಿ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲೆ ಸುಶೀಲಾ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯುವಜನ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಕಿಶನ್ ಶೆಟ್ಟಿ, ವತ್ಸಲಾ ದಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿವ್ಯಪ್ರಭಾ ಮತ್ತು ಅನುರಾಧಾ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ಹೊಳ್ಳ ವಂದಿಸಿದರು.