ಬೌದ್ಧ ಧರ್ಮ, ಹೊಲೆಯ ಎಂದು ಬರೆಸಿ

IMG-20250922-WA0141
Published on

ಆಲೂರು: ಸಾಮಾಜಿಕ ಹಾಗೂ ಆರ್ಥಿಕ ಜಾತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯವರು ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ಜಾತಿ ಕಾಲಂನಲ್ಲಿ ಹೊಲೆಯ ಎಂದು ಬರೆಸುವಂತೆ ಆಲೂರು ತಾಲೂಕು ದಸಂಸ ಸಂಚಾಲಕ ಗೇಕರವಳ್ಳಿ ಬಸವರಾಜು ಮನವಿ ಮಾಡಿದರು.

ಇಂದಿನಿಂದ ಜಾತಿ ಸಮೀಕ್ಷೆ ನಡೆಸಲಾಗುತ್ತಿದ್ದು, ಅಂಬೇಡ್ಕರ್ ಅವರ ಅನುಯಾಯಿಗಳಾದ ನಾವು ಅಂಬೇಡ್ಕರ್ ಅವರು ಹಿಂದು ಧರ್ಮ ತ್ಯಜಿಸಿ ನಮ್ಮ ಮೂಲ ಧರ್ಮವಾದ ಬೌದ್ಧ ಧರ್ಮ ಅಪ್ಪಿಕೊಂಡರು. ಹಾಗಾಗಿ ಅವರ ಮಾರ್ಗದಲ್ಲಿ ನಾವೆಲ್ಲರೂ ಸಾಗುತ್ತಾ ಅಂಬೇಡ್ಕರ್ ಆಶಯದಂತೆ ನಮ್ಮ ಧರ್ಮಕ್ಕೆ ಮರಳಿ ಹೋಗಬೇಕಿದೆ. ಈ ಹಿಂದೆ ನಡೆದ ಸಮೀಕ್ಷೆಯಲ್ಲಿ ಗೊಂದಲ ಉಂಟಾಗಿತ್ತು. ಜಾಗೃತಿ ಮೂಡಿಸುವಲ್ಲಿ ವಿಫಲರಾದೆವು. ಈಗಿನ ಸಮೀಕ್ಷೆಯಲ್ಲಿ ಧರ್ಮದ ಕಾಲಂ 6ರಲ್ಲಿ ಬೌದ್ಧ ಧರ್ಮ ಎಂದು ಜಾತಿಯ ಕಾಲಂನಲ್ಲಿ ಹೊಲಯ ಎಂದು ದಾಖಲಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಿರಿಯ ದಲಿತ ಮುಖಂಡ ದೇವರಾಜ್ ಮಾತನಾಡಿ, ಈ ಹಿಂದೆ ನಡೆದ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ನಮಗೆ ಅನ್ಯಾಯವಾಗಿದೆ. ಅತಿ ಹೆಚ್ಚಾಗಿ ರಾಜ್ಯದಲ್ಲಿ ಬಲಗೈ ಸಮುದಾಯ ವಾಸಿಸುತ್ತಿದೆ. ಪಟ್ಟಣ ಪ್ರದೇಶದಲ್ಲಿ ವಾಸಿಸುವ ಜನರು ತಮ್ಮ ಜಾತಿ ಹೇಳಲು ಹಿಂಜರಿದ ಪರಿಣಾಮ ದಾಖಲೆಯಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಕಡಿಮೆ ಬಂದಿದೆ. ಈ ಸಮೀಕ್ಷೆಯಲ್ಲಿ ಹಾಗೆ ಆಗಬಾರದು ಎಂದು ಹೇಳಿದರು.

ಹಿರಿಯ ದಲಿತ ಮುಖಂಡರಾದ ಅಜ್ಜೇನಳ್ಳಿ ರಂಗಯ್ಯ, ಕೊಂಗಳ್ಳಿ ಸುರೇಶ್, ನೇರಗಳಲೆ ಹನುಮಯ್ಯ, ಯಡೂರು ಧರ್ಮ, ಮುದಿಗೆರೆ ಮಣಿಕಂಠ ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net